ಹೋಳಿ ಹಬ್ಬದ ಆಚರಣೆ: ನಕಲಿ ಮದ್ಯ ಸೇವಿಸಿ 37 ಮಂದಿ ಸಾವು!

Prasthutha|

ಪಾಟ್ನಾ: ಹೋಳಿ ಹಬ್ಬದ ಆಚರಣೆಯ ವೇಳೆ ನಕಲಿ ಮದ್ಯ ಸೇವಿಸಿ 37 ಮಂದಿ ಸಾವನಪ್ಪಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.

- Advertisement -

ಹೋಳಿ ದಿನದಿಂದ ಬಿಹಾರದ ಮೂರು ಜಿಲ್ಲೆಗಳಲ್ಲಿ ಈವರೆಗೆ ನಕಲಿ ಮದ್ಯ ಸೇವಿಸಿ 37 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲು ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಕೆಲವರು ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿಯ ನಂತರ ನಿಖರ ಮಾಹಿತಿ ತಿಳಿದು ಬರಬೇಕಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Join Whatsapp