ದೇಶದಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು, 22 ಸಾವು

Prasthutha|

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ 20,303 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

- Advertisement -

ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿರುವ ಅಂಕಿ–ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು 22 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ ರಾಜ್ಯದಲ್ಲೇ 20ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 05 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74 ಇದೆ.

ದೇಶದಲ್ಲಿ ಒಟ್ಟು 4,30,98,743 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 5,24,024ಕ್ಕೆ ಏರಿಕೆಯಾಗಿದೆ.



Join Whatsapp