Home ಟಾಪ್ ಸುದ್ದಿಗಳು ದೇಶದಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು, 22 ಸಾವು

ದೇಶದಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು, 22 ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,805 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ 20,303 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಇಂದು ಬೆಳಗ್ಗೆ ಬಿಡುಗಡೆ ಮಾಡಲಾಗಿರುವ ಅಂಕಿ–ಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಒಟ್ಟು 22 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ ರಾಜ್ಯದಲ್ಲೇ 20ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ. 05 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.74 ಇದೆ.

ದೇಶದಲ್ಲಿ ಒಟ್ಟು 4,30,98,743 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 5,24,024ಕ್ಕೆ ಏರಿಕೆಯಾಗಿದೆ.

Join Whatsapp
Exit mobile version