ಸಾಲಬಾಧೆ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Prasthutha|

- Advertisement -

ತುಮಕೂರು: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ತಾಲೂಕಿನ ಪಂಡಿತನಹಳ್ಳಿಯ ರೈಲ್ವೆಗೇಟ್ ಬಳಿ ನಡೆದಿದೆ.

ಸಿದ್ದಗಂಗಯ್ಯ (62), ಸುನಂದಮ್ಮ ಹಾಗೂ ಗೀತಾ ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು. ತುಮಕೂರಿನ ಮರಳೂರು ನಿವಾಸಿಯಾಗಿದ್ದ ಸಿದ್ದಗಂಗಯ್ಯ, ಕಳೆದ ಎರಡು ವರ್ಷಗಳ ಹಿಂದೆ ಕೆಇಬಿಯಲ್ಲಿ ನಿವೃತ್ತಿ ಹೊಂದಿದ್ದು, ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ