ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ನಿಲಸೋಗೆ ಗ್ರಾಮದ ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗ್ರಾಮದ ಹೊರಭಾಗದಲ್ಲಿ ನಡೆದುಕೊಂಡು ಬೆಳಿಗ್ಗೆ ಹೋಗುತ್ತಿದ್ದ ಮೂವರು ಕಾಣದೇ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.