ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್: ಮೊಯ್ಲಿಗೆ ನಿರಾಸೆ

Prasthutha|

ಕಾಂಗ್ರೆಸ್ ಅಭ್ಯರ್ಥಿಗಳ 3ನೇ ಪಟ್ಟಿ ರಿಲೀಸ್ ಆಗಿದೆ. ಕರ್ನಾಟಕದ ಮೂರು ಹಾಗೂ ರಾಜಸ್ಥಾನದ 2 ಲೋಕಸಭಾ ಕ್ಷೇತ್ರ ಸೇರಿದಂತೆ ಒಟ್ಟು 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

- Advertisement -

ಈ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ, ಬಳ್ಳಾರಿ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ.

ಚಿಕ್ಕಬಳ್ಳಾಪುರದಿಂದ ರಕ್ಷಾರಾಮಯ್ಯ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಇನ್ನು ಬಳ್ಳಾರಿಯಿಂದ E. ತುಕಾರಾಂ ಅವರನ್ನು ಕಣಕ್ಕೆ ಇಳಿಸಲು ನಿರ್ಧರಿಸಲಾಗಿದೆ. ಚಾಮರಾಜನಗರದಿಂದ ಎಚ್.ಸಿ. ಮಹದೇವಪ್ಪನವರ ಪುತ್ರ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ತನ್ನ 3ನೇ ಪಟ್ಟಿಯಲ್ಲೂ ಕೋಲಾರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸದೇ ಇನ್ನಷ್ಟು ಕುತೂಹಲ ಮೂಡಿಸಿದೆ.

- Advertisement -

ಚಿಕ್ಕಬಳ್ಳಾಪುರದಲ್ಲಿ ಮೊಯ್ಲಿಗಿಲ್ಲ ಟಿಕೆಟ್

ಚಿಕ್ಕಬಳ್ಳಾಪುರ ಟಿಕೆಟ್‌ಗಾಗಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಶತಾಯಗತಾಯ ಪ್ರಯತ್ನ ಮಾಡಿದ್ದರು. ರಕ್ಷಾ ರಾಮಯ್ಯ ಯುವಕ, ಮುಂದಿನ ಬಾರಿ ಕೊಡಬಹುದು. ನನಗೆ ಈಗ ಮತ್ತೊಮ್ಮೆ ಅವಕಾಶ ಮಾಡಿಕೊಡಿ ಎಂದು ಮಾಜಿ ಸಿಎಂ ಮೊಯ್ಲಿ ಆಗ್ರಿಹಿಸಿದ್ದರು. ಮತ್ತೊಂದೆಡೆ ಮಾಜಿ ಸಚಿವ ಎನ್‌ಎಚ್‌ ಶಿವಶಂಕರ್ ರೆಡ್ಡಿ ಕೂಡ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಆದರೆ ಅಂತಿಮವಾಗಿ ಕಾಂಗ್ರೆಸ್ ಟಿಕೆಟ್ ರಕ್ಷಾ ರಾಮಯ್ಯರ ಪಾಲಾಗಿದೆ.



Join Whatsapp