ಇಂದು ದೇಶದಲ್ಲಿ 3ನೇ ಹಂತದ ಲೋಕಸಭಾ ಚುನಾವಣೆ: ಅಮಿತ್ ಶಾ ಸೇರಿ ಹಲವು ಪ್ರಮುಖರು ಕಣದಲ್ಲಿ

Prasthutha|

ನವದೆಹಲಿ: 2024ರ ಲೋಕಸಭೆಗೆ ಈಗಾಗಲೇ ಭಾರತದಲ್ಲಿ ಎರಡು ಹಂತದ ಚುನಾವಣೆಗಳು ನಡೆದಿವೆ. ಮೂರನೇ ಹಂತದ ಮತದಾನ ಇಂದು ನಡೆಯಲಿದೆ.

- Advertisement -

ಈ ಹಂತದಲ್ಲಿ 12 ರಾಜ್ಯಗಳ 93 ಸ್ಥಾನಗಳ ಕಣದಲ್ಲಿ ಒಟ್ಟು 1300ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಣದಲ್ಲಿದ್ದಾರೆ.1989 ರಿಂದಲೂ ಬಿಜೆಪಿ ಭದ್ರಕೋಟೆಯಾಗಿರುವ ಗುಜರಾತ್‌ನ ಗಾಂಧಿನಗರದಿಂದ ಎರಡನೇ ಗೆಲುವು ಸಾಧಿಸುವ ಭರವಸೆಯಲ್ಲಿ ಅವರಿದ್ದಾರೆ. 2019 ರಲ್ಲಿ ಸಿಜೆ ಚಾವ್ಡಾ ವಿರುದ್ಧ ಅಮಿತ್‌ ಶಾ, ಬರೋಬ್ಬರಿ 5.55 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸೋನಾಲ್ ಪಟೇಲ್.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಧಾರವಾಡ ಲೋಕಸಭಾ ಕ್ಷೇತ್ರದ ಪ್ರಹ್ಲಾದ್ ಜೋಶಿ ಮತ್ತೊಂದು ಗೆಲುವಿನ ಕನಸಿನಲ್ಲಿದ್ದಾರೆ. 2004 ರಿಂದ ಜೋಶಿ ಅವರು ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಾ ಬಂದಿದ್ದಾರೆ. ಈ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ಅವರು ವಿನೋದ ಅಸೂಟಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಇವರು 2 ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದರು.

- Advertisement -

ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಧ್ಯಪ್ರದೇಶದ ಗುನಾದಿಂದ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಯಾದವೇಂದ್ರ ರಾವ್ ದೇಶರಾಜ್ ಸಿಂಗ್ ಅವರಿಂದ ಪೈಪೋಟಿ ಎದುರಿಸುತ್ತಿದ್ದಾರೆ.

ಮುಲಾಯಂ ಸಿಂಗ್ ಯಾದವ್ ಸ್ಪರ್ಧಿಸುತ್ತಿದ್ದ ಉತ್ತರ ಪ್ರದೇಶದ ಮೈನ್‌ಪುರಿ ಕ್ಷೇತ್ರದಿಂದ ಈ ಬಾರಿ ಅವರ ಸೊಸೆ ಡಿಂಪಲ್ ಯಾದವ್ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಅವರು ಬಿಜೆಪಿಯ ಜೈವೀರ್ ಸಿಂಗ್ ಠಾಕೂರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಬಾರಾಮತಿ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ. ಇವರಿಗೆ ಈ ಕ್ಷೇತ್ರದಲ್ಲಿ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಸವಾಲು ಎಸೆಯಲಿದ್ದಾರೆ. ಸಾಮಾಜಿಕ ಕಾರ್ಯಗಳಿಗೆ ಹೆಸರಾಗಿರುವ ಸುನೇತ್ರಾ ಅವರು ಈ ಚುನಾವಣೆಯಲ್ಲಿ ಪವಾರ್ ಅವರ ಪರಂಪರೆಗೆ ಸವಾಲು ಹಾಕಲಿದ್ದಾರೆ. ಬಾರಾಮತಿ ಕ್ಷೇತ್ರವು 1984 ರಿಂದ ಪವಾರ್ ಕುಟುಂಬದ ಭದ್ರಕೋಟೆಯಾಗಿದೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ರಾಜ್‌ಗಢದಿಂದ ಚುನಾವಣಾ ಕಣಕ್ಕೆ ಮರಳಿದ್ದಾರೆ. ಇದನ್ನು ತನ್ನ “ಅಂತಿಮ ಚುನಾವಣೆ” ಎಂದು ಹೇಳಿಕೊಂಡಿರುವ ದಿಗ್ವಿಜಯ್ ಸಿಂಗ್, ಬಿಜೆಪಿ ಸಂಸದ ರೋಡ್ಮಲ್ ನಗರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯಾಗಿದ್ದ ಶಿವರಾಜ್ ಸಿಂಗ್ ಚೌಹಾಣ್ ವಿದಿಶಾದಿಂದ ಕಾಂಗ್ರೆಸ್‌ನ ಪ್ರತಾಪ್ ಭಾನು ಶರ್ಮಾ ವಿರುದ್ಧ ಕಣದಲ್ಲಿದ್ದಾರೆ

Join Whatsapp