ಗುವಾಹಟಿ: ಬರ್ಸಾಪುರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3ನೇ ಟಿ-20 ಪಂದ್ಯದಲ್ಲಿ ಆಸೀಸ್ ಭಾರತದ ವಿರುದ್ಧ 5 ವಿಕೆಟ್ಗಳ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭಿಕ ಋತುರಾಜ್ ಗಾಯಕ್ವಾಡ್ ಅವರ ಸ್ಫೋಟಕ ಬ್ಯಾಟಿಂಗ್ (123 ರನ್, 57 ಎಸೆತ, 13 ಬೌಂಡರಿ, 7 ಸಿಕ್ಸರ್) ಸಹಾಯದಿಂದ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಗಳಿಸಿತ್ತು.
ಆದರೆ ಭಾರತ ನೀಡಿದ 223 ರನ್ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ಗ್ಲೆನ್ ಮ್ಯಾಕ್ಸ್ವೆಲ್ ಅವರ ಅಮೋಘ ಶತಕದ (104 ರನ್, 48 ಎಸೆತ, 8 ಬೌಂಡರಿ, 8 ಸಿಕ್ಸರ್) ಫಲವಾಗಿ 5 ವಿಕೆಟ್ ನಷ್ಟಕ್ಕೆ 20 ಓವರ್ಗಳಲ್ಲಿ ಗೆಲುವಿನ ನಗೆ ಬೀರಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ ಮೊದಲ ಜಯ ತನ್ನದಾಗಿಸಿಕೊಂಡಿದೆ.
ಭಾರತದ ಪರ ರವಿ ಬಿಷ್ನೋಯಿ (4-0-32-2), ಆವೇಶ್ ಖಾನ್ (4-0-37-1), ಅಕ್ಷರ್ ಪಟೇಲ್ (4-0-37-1), ಅರ್ಷ್ದೀಪ್ ಸಿಂಗ್ (4-0-44-1), ಪ್ರಸಿದ್ಧ್ ಕೃಷ್ಣ (4-0-68-0) ರನ್ ನೀಡಿ ವಿಕೆಟ್ ಪಡೆದಿದ್ದಾರೆ.