ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ: ಬಿ.ಎಸ್ ಯಡಿಯೂರಪ್ಪ

Prasthutha|

ಕಲಬುರಗಿ: ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದು, ಟಿಕೆಟ್ ಕುರಿತು ಕೊಟ್ಟ ಸುಳಿವಿನಿಂದ ಆಕಾಂಕ್ಷಿಗಳಿಗೆ ಶಾಕ್ ಆಗಿದೆ.

- Advertisement -

ಈ ಬಗ್ಗೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು. ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದ ಎಲ್ಲಾ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡಲಾಗುವುದು. ಆದಷ್ಟು ಬೇಗ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

Join Whatsapp