Home ಟಾಪ್ ಸುದ್ದಿಗಳು ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ : 4 ಮಂದಿ ಬಂಧನ

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ : 4 ಮಂದಿ ಬಂಧನ

ಮಣಿಪುರ: ಸಂಘರ್ಷ ಪೀಡಿತ ಮಣಿಪುರದಲ್ಲಿ‌ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.  

ಕೃತ್ಯಕ್ಕೆ ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಂದು ದಿನದಲ್ಲಿ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನನ್ನು ಗುರುವಾರ ಬೆಳಗ್ಗೆ ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸರು ತಿಳಿಸಿದ್ದರು. ಆರೋಪಿಯನ್ನು ತೌಲಬ್‌ ಜಿಲ್ಲೆಯಲ್ಲಿ ಬಂಧಿಸಲಾಗಿದ್ದು, ಆತನನ್ನು ಹುಯಿರೆಮ್ ಹೆರಾದಾಸ್ ಸಿಂಗ್ (32) ಎಂದು ಗುರುತಿಸಲಾಗಿದೆ. ವೀಡಿಯೋದಲ್ಲಿ ಈತ ಹಸಿರು ಟೀ ಶರ್ಟ್ ಧರಿಸಿದ್ದ. ಈತ ಮಹಿಳೆಯೊಬ್ಬರನ್ನು ಎಳೆದುಕೊಂಡು ಹೋಗುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ.

ಬರೋಬ್ಬರಿ 77 ದಿನಗಳಿಂದ ಎರಡು ಪ್ರಮುಖ ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷದ ಕಾರಣದಿಂದ ಮಣಿಪುರ ಎಂಬ ಪುಟ್ಟ ರಾಜ್ಯ ಹೊತ್ತಿ ಉರಿಯುತ್ತಿದೆ. ಈವರೆಗೂ ನೂರಾರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಖುದ್ದು ಸೇನೆ ಫೀಲ್ಡ್‌ಗೆ ಇಳಿದರೂ ಸಂಘರ್ಷ ಶಮನವಾಗಿಲ್ಲ. ದಿನೇ ದಿನೇ ಹಿಂಸಾಚಾರ ಹೆಚ್ಚಾಗುತ್ತಲೇ ಸಾಗಿದೆ. ಶಾಂತಿ ಎಂಬುದಿಲ್ಲಿ ಮರೀಚಿಕೆ ಆಗಿದೆ. ಇಂತಹ ಸಂದರ್ಭದಲ್ಲಿ ಮನುಕುಲ ತಲೆತಗ್ಗಿಸುವಂತಹ ವೀಡಿಯೋ ಒಂದು ಹೊರಬಂದಿತ್ತು. ಆದಿವಾಸಿ ಸಮುದಾಯದ ಇಬ್ಬರು ಮಹಿಳೆಯರನ್ನು ಸಂಪೂರ್ಣ ಬೆತ್ತಲೆ ಮಾಡಿದ ರಾಕ್ಷಸಿ ಗುಂಪೊಂದು, ಅವರನ್ನು ನೂರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ಮಾಡಿತ್ತು. ಈ ದೃಶ್ಯಾವಳಿ ಇಡೀ ದೇಶದ ಮನಕಲಕಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

77 ದಿನಗಳ ಬಳಿಕ ಮಣಿಪುರ ಹಿಂಸಾಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗತೊಡಗಿದೆ. ದೇಶವ್ಯಾಪಿ ಆಕ್ರೋಶ ಭುಗಿಲೆದ್ದಿದೆ. ಪಕ್ಷಬೇಧ ಮರೆತು ಎಲ್ಲರೂ ಘಟನೆಯನ್ನು ಖಂಡಿಸಿದ್ದಾರೆ. ಕೀಚಕರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬಂದಿದೆ. ರಾಷ್ಟ್ರೀಯ ಮಹಿಳಾ ಹಕ್ಕುಗಳ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.

Join Whatsapp
Exit mobile version