ದ.ಕ. ಜಿಲ್ಲೆಗೆ 4 CRPF ತುಕುಡಿಗಳು ಆಗಮನ

Prasthutha|

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಿಆರ್ ಪಿ ಎಫ್’ನ ನಾಲ್ಕು ತುಕಡಿಗಳು ಮಂಗಳೂರಿಗೆ ಆಗಮಿಸಿವೆ ಎಂದು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

- Advertisement -


ಒಂದು ತುಕಡಿಯಲ್ಲಿ ತಲಾ 100 ಮಂದಿ ಇರುತ್ತಾರೆ ಇವರನ್ನು ಸೂಕ್ಷ್ಮ ಪ್ರಮುಖ ಸ್ಥಳಗಳಲ್ಲಿ ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


ಈ 4 CRPF ಕಂಪನಿಗಳನ್ನು ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ವಿಧಾನ ಸಭಾ ಕ್ಷೇತ್ರಗಳಿಗೆ ತಲಾ ಒಂದರಂತೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಮುಂದೆ ಇನ್ನು ಹೆಚ್ಚು ಕಂಪನಿಗಳು ಚುನಾವಣೆ ಕರ್ತವ್ಯಕ್ಕೆ ಆಗಮಿಸಲಿವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Join Whatsapp