ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: 4 ಮಂದಿ ಮೃತ್ಯು

Prasthutha|

ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುವಾರ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ನಡೆದಿದೆ. ಆಂಧ್ರಪ್ರದೇಶ ನೋಂದಣಿಯ ಮಾರುತಿ ಸ್ವಿಫ್ಟ್ ಕಾರು ಕೆಳಪೆನ್ನತ್ತೂರು ಕಡೆಗೆ ಹೋಗುತ್ತಿದ್ದಾಗ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ.

- Advertisement -


ಕಾರಿನಲ್ಲಿದ್ದ ಅಳಗನ್, ಪಾಂಡಿಯನ್, ಪ್ರಕಾಶ್ ಮತ್ತು ಚಿರಂಜೀವಿ-ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್ ಚಾಲಕನ ಕೈ ಮುರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp