ಬೆಂಗಳೂರು: ಬಿಜೆಪಿ ವಿರುದ್ಧ 40% ಭ್ರಷ್ಟಾಚಾರ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ್ದಕ್ಕೆ ಕಾನೂನು ಸಂಘರ್ಷ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜಾಮೀನು ಮಂಜೂರಾಗಿದೆ.
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿತ್ತು. ಹೀಗಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಬಿಜೆಪಿ ಕೇಸಿನ ಹಿನ್ನೆಲೆ ಇಂದು ಸಿಎಂ ಮತ್ತು ಡಿಸಿಎಂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಚುನಾವಣೆ ಸಮಯದಲ್ಲಿ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ದ ಭ್ರಷ್ಟಾಚಾರ ಆರೋಪವನ್ನು ಆಗ ಕಾಂಗ್ರೆಸ್ ಮಾಡಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೇಶವ್ ಪ್ರಸಾದ್ ದೂರು ದಾಖಲಿಸಿದ್ದರು.