Home ಟಾಪ್ ಸುದ್ದಿಗಳು 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ: ಕೆಂಪಣ್ಣ

40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲೂ ಮುಂದುವರಿದಿದೆ: ಕೆಂಪಣ್ಣ

ಬೆಂಗಳೂರು: 40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ ಮುಂದುವರಿದಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪ ಮಾಡಿದ್ದಾರೆ.

ಚಾಮರಾಜಪೇಟೆಯ ಗುತ್ತಿಗೆದಾರರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳಲ್ಲಿ ಕರೆದಿರೋ ಪ್ಯಾಕೇಜ್ ಟೆಂಡರ್ ಅನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು. ಜೊತೆಗೆ ಪ್ರತಿಯೊಂದು ಕಾಮಗಾರಿಗೂ ಪ್ರತ್ಯೇಕ ಟೆಂಡರ್ ಕರೆಯಬೇಕು ಎಂದು ಇದೇ ವೇಳೆ ಒತ್ತಾಯ ಮಾಡಿದರು.

ತಕ್ಷಣ ಪ್ಯಾಕೇಜ್ ಸಿಸ್ಟಮ್ ಸ್ಟಾಪ್ ಮಾಡಿ ಪ್ರತ್ಯೇಕ ಟೆಂಡರ್ ಕರೆಯಬೇಕು. ಕೋಲಾರದಲ್ಲಿ ಪ್ಯಾಕೇಜ್ ಟೆಂಡರ್ ಕರೆದಿದ್ದಾರೆ ಬೇರೆ ಜಿಲ್ಲೆಗಳಲ್ಲೂ ಕರೆದಿದ್ದಾರೆ. ಅಧಿಕಾರಿಗಳಿಂದಲೇ ಭ್ರಷ್ಟಾಚಾರ ಶುರುವಾಗಿದೆ. ಅಧಿಕಾರಿಗಳು ದುಡ್ಡು ಕಲೆಕ್ಟ್ ಮಾಡಿ ರಾಜಕಾರಣಿಗಳಿಗೆ ಕೊಡುತ್ತಿದ್ದಾರೆ. ಈ ಹಿಂದೆ ರಾಜಕಾರಣಿಗಳು ನೇರವಾಗಿ ಕಮಿಷನ್ ತೆಗೆದುಕೊಳ್ಳುತ್ತಿದ್ದರು. ಈಗ ಅಧಿಕಾರಿಗಳು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ 40% ಕಮಿಷನ್ ಈಗಲೂ ಮುಂದುವರಿದಿದೆ ಎಂದು ದೂರಿದ್ದಾರೆ.

Join Whatsapp
Exit mobile version