40% ಕಮಿಷನ್, PSI ನೇಮಕಾತಿ ಅಕ್ರಮಗಳ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ: ವಿಪಕ್ಷ ನಾಯಕ ಬಿಕೆ ಹರಿಪ್ರಸಾದ ಒತ್ತಾಯ

Prasthutha|

ಬೆಂಗಳೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬೊಮ್ಮಾಯಿ ನೇತೃತ್ವದ ಸರ್ಕಾರ ಭಷ್ಟವಾಗಿದ್ದು, 40% ಕಮಿಷನ್, PSI ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಒತ್ತಾಯಿಸಿದ್ದಾರೆ.

- Advertisement -

ನಗರದ ಮಲ್ಲೇಶ್ವರಂ ನಲ್ಲಿ ಕಾಂಗ್ರೆಸ್ ಆಯೋಜಿಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 40 % ಕಮಿಷನ್ ಸರ್ಕಾರವಿದೆ. ಪ್ರತಿಯೊಂದು ಯೋಜನೆಯಲ್ಲಿ ಮಂತ್ರಿಗಳಿಗೆ ಕಮಿಷನ್ ಹೋಗ್ತಾ ಇದೆ ಎಂದು ಕಿಡಿಕಾರಿದ್ದಾರೆ.

ಈ ಮಧ್ಯೆ ಸಚಿವ ಅಶ್ವತ್ಥನಾರಾಯಣ್ ವಿರುದ್ಧ ವಾಗ್ದಾಳಿ ನಡೆಸಿದ ಬಿಕೆ ಹರಿಪ್ರಸಾದ್, ಮಲ್ಲೇಶ್ವರಂನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲಿ ಅವರಿಗೆ ಕಮಿಷನ್ ಹೋಗುತ್ತಿದೆ. ಮಲ್ಲೇಶ್ವರಂನ ಬಹುತೇಕ ಕಾಂಟ್ರಾಕ್ಟರ್ ಗಳು ಸಚಿವರ ಸಂಬಂಧಿಗಳೇ ಆಗಿದ್ದಾರೆ ಎಂದು ಬಿಕೆ ಹರಿಪ್ರಸಾದ್ ಆರೋಪಿಸಿದ್ದಾರೆ.

- Advertisement -

ಇದೀಗ PSI ನೇಮಕಾತಿ ಅಕ್ರಮದಲ್ಲಿ ಸಚಿವರ ಸಹೋದರನೇ ಭಾಗಿಯಾಗಿರುವ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಅಶ್ವತ್ಥ ನಾರಾಯನ್ ಅವರು ಮಲ್ಲೇಶ್ವರಂನಲ್ಲಿ ಗುಳುಂ ನಾರಾಯಣ ಎಂದೇ ಖ್ಯಾತಿ ಪಡೆದ್ದಾರೆ ಎಂದು ಛೇಡಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಆರ್ ಎಸ್ ಎಸ್ ಕುಮ್ಮಕ್ಕು ಇದೆ.ಅದರ ಹಣದಿಂದಲೇ ಶ್ರೀಮಂತ ಎನ್ ಜಿಓ ಆಗಿ ಆರ್ ಎಸ್ ಎಸ್ ಬೆಳೆದಿದೆ. ಪ್ರತಿಯೊಬ್ಬ ಸಚಿವರ ಬಳಿ ಆರ್ ಎಸ್ ಎಸ್ ಒಎಸ್ ಡಿ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ ಕಲೆಕ್ಷನ್ ಮಾಡುವುದೇ ಒಎಸ್ಡಿಗಳ ಫುಲ್ ಟೈಂ ಡ್ಯುಟಿ ಆಗಿದ್ದು, ಹಾವಿನಪುರದಲ್ಲಿ ಕುಳಿತು ಹಣ ಕಲೆಕ್ಷನ್ ಮಾಡ್ತಾರೆ ಎಂದು ಆರೋಪಿಸಿದ್ದಾರೆ.

ನಿನ್ನೆ ಅಮಿತ್ ಶಾ ಬಂದಿದ್ದು, ಅಕ್ರಮವೆಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ 40% ಕಮಿಷನ್ ಹಾಗೂ ಅಕ್ರಮ ಪಿಎಸೈ ನೇಮಕಾತಿಯಲ್ಲಿ ಅಮಿತ್ ಶಾ ಪಾಲು ತೆಗೆದುಕೊಳ್ಳಲು ಬಂದಿದ್ದಾರೆ. ಅಮಿತ್ ಶಾ ಆಗಮನದಿಂದ ರಜ್ಯದ ನಯಾಪೈಸೆಯ ಪಯೋಜನವಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಎರಡು ಅಕ್ರಮಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಅಶ್ವತ್ಥ ನಾರಾಯಣ್ ಮತ್ತು ಗೃಹ ಸಚಿವ ಆರಗ ಜ್ಞಾನೆಂದ್ರ ರಾಜೀನಾಮೆ ನೀಡಬೇಕು. ಈ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆಗೊಳಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.



Join Whatsapp