Home ಟಾಪ್ ಸುದ್ದಿಗಳು 40% ಕಮಿಷನ್ ದಂಧೆಗೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣಕ್ಕೆ ಪತ್ರ ಬರೆದ ಗುತ್ತಿಗೆದಾರ

40% ಕಮಿಷನ್ ದಂಧೆಗೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣಕ್ಕೆ ಪತ್ರ ಬರೆದ ಗುತ್ತಿಗೆದಾರ

ಕೃಪೆ: ಸತೀಶ್ ಆಚಾರ್ಯ

ಹುಬ್ಬಳ್ಳಿ: ಬಸವರಾಜ್‌ ಅಮರಗೋಳ ಎಂಬ ಗುತ್ತಿಗೆದಾರರೊಬ್ಬರು ಕಮಿಷನ್ ದಂಧೆಗೆ ಬೇಸತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದಯಾಮರಣಕ್ಕೆ ಪತ್ರ ಬರೆದಿದ್ದಾರೆ.

ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ಕಡೆ ಬಸವರಾಜ್ ಉಪಕರಣಗಳನ್ನು ನೀಡಿದ್ದಾರೆ. ಇದರಲ್ಲಿ 20% ಮಾತ್ರ ಬಿಲ್‌ ಅನ್ನು ನೀಡಿದ್ದಾರೆ. 2 ವರ್ಷಗಳಿಂದ 1 ಕೋಟಿಗೂ ಹೆಚ್ಚು ಮೊತ್ತದ ಬಿಲ್ ಬಾಕಿ ಉಳಿದಿದ್ದು, ದೇವರಾಜ್ ಎಂಬ ಅಧಿಕಾರಿಯೊಬ್ಬರು ಶೇ 40 ಕಮಿಷನ್ ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಬಸವರಾಜ್ ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿದ್ದಾರೆ, ಇದರಿಂದ ಯಾವುದೇ ಸಕರಾತ್ಮಕ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇವರ ಬಳಿ 30 – 40% ಲಂಚ ಇದ್ದರೆ ಮಾತ್ರ ಬಿಲ್‌ ಕೊಡಲು ಸಾಧ್ಯ ಎಂದು ಹೇಳಿದ್ದಾರೆ. ನಂತರ ಮುಖ್ಯಮಂತ್ರಿಗಳೇ ಕರೆ ಮಾಡಿ ಈ ದೂರಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳಬೇಡಿ ಎಂದು ಪೊಲೀಸರಿಗೆ ಹೇಳಿದ್ದಾರೆ ಎಂದೂ ಆರೋಪಿಸಲಾಗಿದೆ.

ಈ ಎಲ್ಲಾ ವಿಚಾರಗಳನ್ನು ಬಸವರಾಜ ಅಮರಗೋಳ ರಾಷ್ಟ್ರಪತಿ ಮುರ್ಮುಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ಒಬ್ಬ ಗುತ್ತಿಗೆದಾರ ನಿಯ್ಯತ್ತಾಗಿ ಕೆಲಸ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಬಂದೊದಗಿದೆ. 40% ಕಮಿಷನ್ ದಂಧೆಯಿಂದ ಆತ್ಮಹತ್ಯೆಗೆ ಪ್ರಯತ್ನಿಸುವಂತಹ ಇಂತಹ ದುಸ್ಥಿಗೆ ತರುವ ಭ್ರಷ್ಟ ಸರ್ಕಾರ ಯಾವಾಗಲಾದರೂ ಬಂದಿತ್ತಾ?ಈ ಬೆಳವಣಿಗೆಯು ಬಿಜೆಪಿ ಸರಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ’ ಎಂದು ಈ ಬಗ್ಗೆ ಕಾಂಗ್ರೆಸ್ ಟೀಕಿಸಿದೆ

Join Whatsapp
Exit mobile version