ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ವೃತ್ತದಲ್ಲಿ ಶನಿವಾರ ನಡೆದ ಕಲ್ಲು ತೂರಾಟ ಹಾಗೂ ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಆರು ಪ್ರಕರಣಗಳನ್ನು ದಾಖಲಿಸಿ 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಶನಿವಾರ ರಾತ್ರಿ 11 ಗಂಟೆಯಿಂದ ಏ. 20 ರವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ.
ಸಂಘಪರಿವಾರದ ಕಾರ್ಯಕರ್ತನೋರ್ವ ಧಾರ್ಮಿಕತೆಗೆ ಧಕ್ಕೆ ಉಂಟಾಗುವ ವೀಡಿಯೋ ಪೋಸ್ಟ್ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆ ತಂದಿದ್ದಾರೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಪೊಲೀಸ್ ವಾಹನಗಳು ಜಖಂಗೊಂಡಿವೆ.