ಮಹೇಂದ್ರಗಢ: ಹರ್ಯಾಣದಲ್ಲಿ 40 ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿಯಾಗಿ ಐವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹೇಂದ್ರಗಢ ಜಿಲ್ಲೆಯ ಕನಿನಾ ದಾದ್ರಿ ರಸ್ತೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತದಲ್ಲಿ ಐದು ಮಕ್ಕಳು ಸಾವನ್ನಪ್ಪಿದ್ದಾರೆ. ಇನ್ನೂ ಹತ್ತಾರು ಮಕ್ಕಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿಯ ನಂತರ ಪೊಲೀಸ್ ಮತ್ತು ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅಪಘಾತಕ್ಕೆ ಚಾಲಕ ಓವರ್ಟೇಕ್ ಮಾಡಿದ್ದೇ ಕಾರಣ ಎನ್ನಲಾಗಿದೆ.