ಕಾಂಗ್ರೆಸ್ ಸೇರಲು ಕಾಯುತ್ತಿರುವ ಬೇರೆ ಪಕ್ಷಗಳ 42 ಮುಖಂಡರ ಅರ್ಜಿ ಇದೆ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಹುದಾದ ಉತ್ತರ ಮತ್ತು ದಕ್ಷಿಣ ಕರ್ನಾಟಕದ ನಾಯಕರ ದೊಡ್ಡ ಪಟ್ಟಿಯನ್ನೇ ತಂದು ಚರ್ಚೆ ಮಾಡಿದ್ದಾರೆ. ವಿವಿಧ ಪಕ್ಷಗಳ 42 ಕ್ಕೂ ಹೆಚ್ಚು ಮುಖಂಡರ ಅರ್ಜಿಗಳು ನನ್ನ ಮುಂದಿದೆ. ಆ ಹೆಸರುಗಳನ್ನು ಈಗ ಬಹಿರಂಗ ಮಾಡುವುದಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

- Advertisement -


ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಮಾಜಿ ಶಾಸಕ, ಶಿರಹಟ್ಟಿಯ ರಾಮಪ್ಪ ಲಮಾಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಬಳಿಕ ಮಾತನಾಡಿದ ಅವರು, ‘ಸ್ಥಳೀಯ ನಾಯಕರುಗಳ ಜತೆ ಚರ್ಚಿಸಿ, ಒಮ್ಮತ ಮೂಡಿಸಿ ಇತರ ಪಕ್ಷಗಳ ನಾಯಕರುಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ವಿರೋಧ ಪಕ್ಷಗಳ ಮೈತ್ರಿಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿರುವುದರಿಂದ ರಾಜ್ಯ, ರಾಷ್ಟ್ರಮಟ್ಟದಲ್ಲಿ ನಮ್ಮ ಪಕ್ಷ ಹಾಗೂ ಕಾರ್ಯಕರ್ತರಿಗೆ ಶಕ್ತಿ ತುಂಬಿದಂತಾಗಿದೆ’ ಎಂದು ಹೇಳಿದರು.