Home ಟಾಪ್ ಸುದ್ದಿಗಳು ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಕುಣಿಗಲ್: ರಾಮನವಮಿ ಪಾನಕ ಸೇವಿಸಿದ 42 ಮಂದಿ ವಾಂತಿ, ಭೇದಿಯಿಂದಾಗಿ ಅಸ್ವಸ್ಥರಾಗಿದ್ದಾರೆ.


ಗುರುವಾರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡವತ್ತಿ ಗ್ರಾಮ ಸಮೀಪದ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಬುಧವಾರ ರಾಮನವಮಿ ಪ್ರಯುಕ್ತ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿತ್ತು. ಸಂಜೆಯಾಗುತ್ತಿದ್ದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಪಟ್ಟಣದ ಆಸ್ಪತ್ರೆಗೆ ದಾಖಲಾಗಿದ್ದಾರೆ.

Join Whatsapp
Exit mobile version