ಮೋದಿ ಸಂಪುಟದ ಶೇ 42 ರಷ್ಟು ಸಚಿವರು ಕ್ರಿಮಿನಲ್ ಹಿನ್ನೆಲೆಯವರು; 70 ಸಚಿವರು ಕೋಟ್ಯಾಧಿಪತಿಗಳು!

Prasthutha: July 10, 2021

ಮೋದಿ ಸಚಿವ ಸಂಪುಟದಲ್ಲಿ ಹೊಸದಾಗಿ 44 ಮಂದಿ ಸಚಿವರು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಂಪುಟದಲ್ಲಿರುವ 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಹಿನ್ನೆಲೆಯಿದೆ. ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ, ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ತನ್ನ ವರದಿಯಲ್ಲಿ ತಿಳಿಸಿದೆ.


ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 ಮಂದಿ ತಮ್ಮ ಚುನಾವಣಾ ಅಫಿಡವಿಟ್ ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ.
33 ಮಂದಿ ಮಂತ್ರಿಗಳ ಪೈಕಿ 24 ಮಂತ್ರಿಗಳ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ಘೋಷಿಸಿದ್ದಾರೆ.


ಸಚಿವ ಸಂಪುಟ ಪುನಾರಚನೆ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ ಶೇಕಡಾ 3 ರಷ್ಟು ಏರಿಕೆಯಾಗಿದೆ. 2019ರಲ್ಲಿ ರಚನೆಯಾದ ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು.


ಮೋದಿ ಸಂಪುಟದಲ್ಲಿ ಶೇಕಡಾ 91 ರಷ್ಟು ಸಚಿವರು ಕೋಟ್ಯಾಧಿಪತಿಗಳು

ನರೇಂದ್ರ ಮೋದಿ ಸಂಪುಟದ 78 ಸಚಿವರಲ್ಲಿ 70 ಸಚಿವರು ಕೋಟ್ಯಾಧಿಪತಿಗಳಾಗಿದ್ದಾರೆ. ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ಆಗಿದೆ. ಮೋದಿ ಸಂಪುಟದ 4 ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂ, ಪಿಯೂಷ್ ಗೋಯಲ್ – 95 ಕೋಟಿ ರೂ, ನಾರಾಯಣ್ ರಾಣೆ – 87 ಕೋಟಿ ರೂ, ರಾಜೀವ್ ಚಂದ್ರಶೇಖರ್ – 64 ಕೋಟಿ ರೂ ಆಸ್ತಿ ಘೋಷಿಸಿಕೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ