Home ಕರಾವಳಿ 42 ಸಿಮ್‌ ಕಾರ್ಡ್‌ ಖರೀದಿ ಪ್ರಕರಣ ED ತನಿಖೆಗೆ

42 ಸಿಮ್‌ ಕಾರ್ಡ್‌ ಖರೀದಿ ಪ್ರಕರಣ ED ತನಿಖೆಗೆ

ಮಂಗಳೂರು: ವಿವಿಧ ವ್ಯಕ್ತಿಗಳ ಹೆಸರಿನಲ್ಲಿ 42 ಸಿಮ್‌ ಕಾರ್ಡ್‌ ಖರೀದಿಸಿ, ಬೆಂಗಳೂರಿಗೆ ತೆರಳುತ್ತಿದ್ದ ಐವರನ್ನು ವಶಕ್ಕೆ ಪಡೆದ ಪ್ರಕರಣದ ತನಿಖೆಗೆ ಕೇಂದ್ರ ಜಾರಿ ನಿರ್ದೇಶನಾಲಯ (ED) ಮುಂದಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲೂಕು ಬಡಗಕಜೆಕಾರು ಗ್ರಾಮದ ಅಕ್ಬರ್ ಅಲಿ (24), ಬೆಳ್ತಂಗಡಿಯ ಸಂಜಯನಗರದ ಮಹಮ್ಮದ್‌ ಮುಸ್ತಫಾ (22), ನೆರಿಯ ಗುಂಪುಕಲ್ಲುವಿನ ರಮೀಝ್ (20), ಪಡಂಗಡಿ ಗ್ರಾಮದ ಬದ್ಯಾರು ನಿವಾಸಿ ಮಹಮ್ಮದ್‌ ಸಾದಿಕ್‌ (27) ಮತ್ತು ಓರ್ವ ಅಪ್ರಾಪ್ತ ಬಾಲಕನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಮೇಲೆ ದಾಖಲಾದ ಮೋಸ, ವಂಚನೆ ಅಥವಾ ನಿಗೂಢ ಕಾರ್ಯಸಾಧನೆ ಮಾಡುವ ಪ್ರಕರಣದ ಜತೆಗೆ ವಿದೇಶಿ ಕರೆನ್ಸಿ ದಂಧೆಯಲ್ಲಿ ಶಾಮೀಲಾದ ಸಾಧ್ಯತೆ ಕುರಿತಂತೆ ಹಿರಿಯ ಪೊಲೀಸರು ಅಧಿಕಾರಿಗಳು ಇಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ವಿದೇಶಿ ನಂಟಿನ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಪತ್ರವನ್ನೂ ಬರೆದಿದ್ದು, ಅದರಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗಮಿಸಿ, ಆರೋಪಿಗಳನ್ನು ವಿಚಾರಣೆ ನಡೆಸಿ, ಮಾಹಿತಿ ಕಲೆಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಹೊಸ ಪ್ರಕರಣ ದಾಖಲಿಸಿ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version