ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿ: 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ

Prasthutha|

ಹಾವೇರಿ: ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ.

- Advertisement -

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ನಾಲ್ವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.



Join Whatsapp