Home ಟಾಪ್ ಸುದ್ದಿಗಳು ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿ: 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ

ಪ್ರವಾಸಕ್ಕೆ ಹೊರಟ್ಟಿದ್ದ ಸರ್ಕಾರಿ ಬಸ್ ಪಲ್ಟಿ: 45 ಮಕ್ಕಳಿಗೆ ಗಾಯ, ನಾಲ್ವರು ಗಂಭೀರ

ಹಾವೇರಿ: ಶೈಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳು ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಅಪಘಾತಕ್ಕೀಡಾಗಿದ್ದು, 45 ಮಕ್ಕಳಿಗೆ ಗಾಯಗಳಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕಿನ ಸಜ್ಜನಗುಡ್ಡದ ಸರ್ಕಾರಿ ಶಾಲೆ ಮಕ್ಕಳು ಪ್ರವಾಸಕ್ಕೆ ಆಗಮಿಸಿದ್ದ ವೇಳೆ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ನಾಲ್ವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, 45 ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Join Whatsapp
Exit mobile version