ನವದೆಹಲಿ: ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ವಿಪಕ್ಷಗಳು ಪಟ್ಟು ಹಿಡಿದಿದ್ದು, ಇಂದು ಬೆಳಿಗ್ಗೆ 30 ಸಂಸದರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಸಭೆಯಲ್ಲೂ ಪ್ರತಿಪಕ್ಷಗಳ ಸಂಸದರು ಅಮಿತ್ ಶಾ ಹೇಳಿಕೆಗೆ ಪಟ್ಟು ಹಿಡಿದಿದ್ದು, ರಾಜ್ಯ ಸಭೆಯಿಂದ 46 ಸಂಸದರನ್ನು ಅಮಾನತು ಮಾಡಲಾಗಿದೆ.
ರಾಜ್ಯಸಭೆಯಿಂದ ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿ 46 ಸಂಸದರನ್ನು ಅಮಾನತು ಮಾಡಲಾಗಿದೆ.
ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದಂತೆ 30 ಸಂಸದರನ್ನು ಬೆಳಿಗ್ಗೆ ಅಮಾನತು ಮಾಡಲಾಗಿತ್ತು.
ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರಕಾರ ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ ಎಂದು ಹೇಳಿದ್ದಾರೆ.