47 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ವಿರುದ್ಧ ನಾನೂ ಬೀದಿಗಿಳಿದು ಹೋರಾಡಿದ್ದೆ: ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: 47 ವರ್ಷದ ಹಿಂದೆ ತುರ್ತು ಪರಿಸ್ಥಿತಿ ಜಾರಿ ಮಾಡಿದ ಕಾಂಗ್ರೆಸ್ ನೀತಿಯ ವಿರುದ್ಧ ಅಂದು ನಾನೂ ಬೀದಿಗಿಳಿದು ಹೋರಾಟ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement -

ನಾಲ್ಕು ದಶಕದ ಹಿಂದೆ ಕಾಂಗ್ರೆಸ್ ಹೇರಿದ ತುರ್ತುಪರಿಸ್ಥಿತಿ ಹಿನ್ನೆಲೆಯಲ್ಲಿ ಶನಿವಾರ ಬಿಜೆಪಿ ಏರ್ಪಡಿಸಿದ್ದ ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತಾಡಿದ ಬೊಮ್ಮಾಯಿ, ನಾನು, ನನ್ನದು, ನನ್ನ ಕುಟುಂಬ ಎಂಬ ಭ್ರಮೆ ತುರ್ತು ಪರಿಸ್ಥಿತಿಗೆ ಕಾರಣವಾಗಿತ್ತು. ಕಾಂಗ್ರೆಸ್ ನ ಅಧಿಕಾರ ದುರುಪಯೋಗಕ್ಕೆ ಇದು ಸ್ಪಷ್ಟಕೈ ಕೈಗನ್ನಡಿಯಾಗಿತ್ತು. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರಿಂದ ರಾಷ್ಟ್ರ ರಾಜಕಾರಣ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹಳ ಬದಲಾವಣೆಯಾಯಿತು. ಈ ಸಂಘರ್ಷದಲ್ಲಿ ಕೊನೆಗೆ ಜನಶಕ್ತಿಯೇ ಜಯಗಳಿಸಿತು ಎಂದು ಬೊಮ್ಮಾಯಿ ಹೇಳಿದರು.

ತುರ್ತು ಪರಿಸ್ಥಿತಿ ದೇಶದ ರಾಜಕಾರಣ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ. ಈಗ ಕಾಂಗ್ರೆಸ್ ಪರವಾಗಿ ಮಾತನಾಡುವವರು ಅಂದು ತುರ್ತು ಪರಿಸ್ಥಿತಿ ವಿರೋಧಿಸಿದ್ದನ್ನು ಒಪ್ಪಿಕೊಳ್ಳಬೇಕು, ಆತ್ಮವಂಚನೆ ಮಾಡಿಕೊಳ್ಳಬಾರದು ಎಂದು ಬೊಮ್ಮಾಯಿ ಹೇಳಿದರು.



Join Whatsapp