ಮಂಡ್ಯ: ರಾಜ್ಯದಲ್ಲಿ 48 ಲಕ್ಷ ಆರ್‌ಟಿಸಿಗಳು ಇಂದಿಗೂ ಸತ್ತವರ ಹೆಸರಿನಲ್ಲೇ ಮುನ್ನಡೆಯುತ್ತಿವೆ. ದಾಖಲೆಗಳ ನಿರ್ವಹಣೆ ಎಂದರೆ ಇದೇನಾ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅಧಿಕಾರಿಗಳ ವಿರುದ್ಧ ಚಾಟಿ ಬೀಸಿದರು.
ನಗರದ ಜಿಲ್ಲಾ ಪಂಚಾಯ್ತಿಯ ಕಾವೇರಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬದುಕಿರುವವರ ಹೆಸರಿನಲ್ಲಿ ಆರ್‌ಟಿಸಿಯನ್ನು ಉಳಿಸಿ ಅವುಗಳಿಗೆ ಜೀವ ನೀಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು.
ತಹಸೀಲ್ದಾರ್‌ಗಳು, ಕಂದಾಯಾಧಿಕಾರಿಗಳು ಸ್ವಲ್ಪ ಶ್ರಮವಹಿಸಿ ಕೆಲಸ ಮಾಡಿದರೆ ಇದು ಸಾಧ್ಯವಾಗಲಿದೆ ಎಂದು ಸಲಹೆ ನೀಡಿದರು. ಮಂಡ್ಯ ಜಿಲ್ಲೆಯಲ್ಲೇ ಆಧಾರ್ ಸೀಡಿಂಗ್ ವೇಳೆ ೨,೯೯,೫೩೩ ಆರ್‌ಟಿಸಿಗಳು ಸತ್ತವರ ಹೆಸರಿನಲ್ಲಿವೆ. ಇದರಲ್ಲಿ 33557 ಪ್ರಕರಣಗಳಲ್ಲಿ ಪೌತಿ ಖಾತೆ ಮಾಡಲಾಗಿದೆ. ಉಳಿದಿದ್ದನ್ನು ಮಾಡುವುದು ಯಾವಾಗ. ಪೌತಿ ಖಾತೆ ಮಾಡಿಕೊಡುವುದಕ್ಕೆ ಇರುವ ತೊಂದರೆಯಾದರೂ ಏನು ಎಂದು ನೇರವಾಗಿಯೇ ಪ್ರಶ್ನಿಸಿದರು.