ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

Prasthutha|

ನವದೆಹಲಿ: ಲೋಕಸಭೆಯಲ್ಲಿ ಸಂಭವಿಸಿದ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಉತ್ತರಕ್ಕೆ ಒತ್ತಾಯಿಸುತ್ತಿರುವ ವಿರೋಧ ಪಕ್ಷಗಳ 49 ಸದಸ್ಯರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅಮಾನತು ಮಾಡಿದ್ದಾರೆ.

- Advertisement -

ಇದರೊಂದಿಗೆ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತು ಆದ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತು ಮಾಡಲಾಗಿತ್ತು. ಮಂಗಳವಾರ ಅಮಾನತು ಆದವರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಫಾರೂಕ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ ಮುಖಂಡರಾದ ಶಶಿ ತರೂರ್, ಮನೀಶ್ ತಿವಾರಿ ಅವರೂ ಸೇರಿದ್ದಾರೆ.



Join Whatsapp