ಮುಂಬೈ-ಪುಣೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 5 ಸಾವು, ನಾಲ್ವರಿಗೆ ಗಾಯ

Prasthutha|

ಮುಂಬೈ: ಕಾರೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ-ಪುಣೆ ಹೆದ್ದಾರಿಯಲ್ಲಿ ನಡೆದಿದೆ.

- Advertisement -

ಗುರುವಾರ ತಡರಾತ್ರಿ ಪನ್ವೇಲ್ ನ ಖೋಪೋಲಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಒಂಬತ್ತು ಪ್ರಯಾಣಿಕರೊಂದಿಗೆ ವೇಗವಾಗಿ ಬಂದ ಕಾರು ಹಿಂದಿನಿಂದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರಗೆ ಸಾಗಿಸಿದ ತಕ್ಷಣ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ನಾಲ್ವರನ್ನು ಪನ್ವೇಲ್ ನ ಕಮೋಥೆಯಲ್ಲಿರುವ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಖೋಪೋಲಿ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಮತ್ತು ಮುಂದಿನ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Join Whatsapp