ನೈಜೀರಿಯಾದಲ್ಲಿ ಮಸೀದಿ ಮೇಲೆ ಬಂದೂಕುಧಾರಿಯ ದಾಳಿ | ಐವರು ಸಾವು, 18 ಮಂದಿ ಅಪಹರಣ

Prasthutha: November 23, 2020

ಅಬುಜ : ನೈಜೀರಿಯಾದ ಝಂಫಾರಾ ರಾಜ್ಯದಲ್ಲಿ ಮಸೀದಿಯೊಂದರ ಮೇಲೆ ಬಂದೂಕುಧಾರಿ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟಿದ್ದಾರೆ. ಅಲ್ಲದೆ, 18 ಮಂದಿಯನ್ನು ಅಪಹರಿಸಲಾಗಿದೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಪಹೃತರಲ್ಲಿ ಮಸೀದಿಯ ಓರ್ವ ಇಮಾಮ್ ಕೂಡ ಸೇರಿದ್ದಾರೆ. ಪ್ರಾರ್ಥನೆಗೆ ಬರುವವರ ರೀತಿಯಲ್ಲೇ ವೇಷ ಮರೆಸಿ ಬಂದಿದ್ದ ಬಂದೂಕುಧಾರಿ, ಪ್ರಾರ್ಥನೆಯಲ್ಲಿ ನಿರತರಾದವರ ಮೇಲೆ ಗುಂಡಿನ ದಾಳಿ ಆರಂಭಿಸಿದನು ಎಂದು ವರದಿಗಳು ತಿಳಿಸಿವೆ.

ದರೋಡೆ, ಅಪಹರಣ ಸೇರಿದಂತೆ ಮತ್ತಿತರ ಅಪರಾಧ ಚಟುವಟಿಕೆಗಳು ಇತ್ತೀಚಿನ ದಿನಗಳಲ್ಲಿ ನೈಜೀರಿಯಾದಲ್ಲಿ ವ್ಯಾಪಕವಾಗಿದೆ ಎನ್ನಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!