ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಮಂದಿ ಸಾವು, ಒಬ್ಬರು ಗಂಭೀರ

Prasthutha|

ಲಕ್ನೋ: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಇಂದು ನಡೆದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಯುಪಿಯಿಂದ ವರದಿಯಾಗಿದೆ.

- Advertisement -

ಯುಪಿಯ ಬಸ್ತಿ ಜಿಲ್ಲೆಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್ ಗೆ ಅತೀ ವೇಗದಲ್ಲಿ ಬಂದ ಕಾರು ಟ್ರಕ್ ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ನಡೆದಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಈ ದುರ್ಘಟನೆಯಲ್ಲಿ ಐವರು ಮೃತಪಟ್ಟು ನಾಲ್ವರಿಗೆ ಗಾಯವಾಗಿದ್ದು. ಒಬ್ಬರ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ಮೂಲಗಳು ಸ್ಪಷ್ಟಪಡಿಸಿವೆ.

ಲಖೌ ದಿಂದ ಜಾರ್ಖಂಡ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಡೆದ ಈ ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮಾತ್ರವಲ್ಲದೆ, ವಿಪತ್ತು ನಿರ್ವಹಣೆಯ ಅಧಿಕಾರಿಗಳು ಕ್ರೇನ್ ಬಳಸಿ ಮೃತದೇಹಗಳನ್ನು ಹೊರ ತೆಗೆಯುವ ದೃಶ್ಯ ಹೃದಯವಿದ್ರಾವಕ ಆಗಿತ್ತು.

- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಮಾತ್ರವಲ್ಲದೆ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಅವರ ಕಚೇರಿ ಮೂಲಗಳು ಸ್ಪಷ್ಟಪಡಿಸಿದೆ.

Join Whatsapp