5 ವರ್ಷದ ವಿಕಲಚೇತನ ಬಾಲಕಿ ಮೇಲೆ ನೆರೆಮನೆಯವನಿಂದ ಅತ್ಯಾಚಾರ

Prasthutha|

ಭೋಪಾಲ್: ಐದು ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿಯ ಮೇಲೆ ಆಕೆಯ ನೆರೆಮನೆಯ 56 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿಸಲಾಗಿದೆ ಎಂದು ಕೋಲಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಚಂದ್ರಕಾಂತ್ ಪಟೇಲ್ ತಿಳಿಸಿದ್ದಾರೆ.

 ಹತ್ತಿರದ ಮನೆಯಿಂದ ನಿಮ್ಮ ಮಗಳ ಕೂಗು ಕೇಳುತ್ತಿದೆ ಎಂದು ನೆರೆಮನೆಯವರು ಬಾಲಕಿಯ ಪೋಷಕರಿಗೆ ತಿಳಿಸಿದ್ದಾರೆ. ಮಗುವಿನ ತಾಯಿ ತಕ್ಷಣವೇ ಅಲ್ಲಿಗೆ ಧಾವಿಸಿದಾಗ  ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

- Advertisement -

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬಂಧಿಸಿದ ಪೊಲೀಸರು ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು  ಇನ್ಸ್ ಪೆಕ್ಟರ್ ಹೇಳಿದ್ದಾರೆ.

Join Whatsapp