ಬೆಂಗಳೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಈಗಲೂ ಬಿಜೆಪಿಯಿಂದ ಪ್ರಯತ್ನ ನಡೆದಿಯುತ್ತಿದೆ. ನಮ್ಮ ಒಬ್ಬೊಬ್ಬ ಶಾಸಕರಿಗೆ ತಲಾ 50 ಕೋಟಿ ರೂ. ಆಫರ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ ಇವತ್ತಿಗೂ ಅವರು (ಬಿಜೆಪಿ) 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ. ಜತೆಗೆ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ನಡೆಯುವ ಚುನಾವಣೆ ಖರ್ಚು ಕೂಡ ತಾವೇ ಭರಿಸುವುದಾಗಿಯೂ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಹಿಂದೆ ಕೂಡ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿ ಮಾಡಿ ಸರಕಾರವನ್ನು ಬೀಳಿಸಿದ್ದರು. ಬಿಜೆಪಿ ಭ್ರಷ್ಟಾಚಾರದ ಪಿತಾಮಹ. ಅದೇ ಹಣದಿಂದ ಈಗಲೂ ಖರೀದಿಗೆ ಯತ್ನ ಮುಂದುವರಿದಿದೆ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.