Home ಟಾಪ್ ಸುದ್ದಿಗಳು ಸಂಚಾರ ಉಲ್ಲಂಘನೆಯ ದಂಡಕ್ಕೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ

ಸಂಚಾರ ಉಲ್ಲಂಘನೆಯ ದಂಡಕ್ಕೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆಯ ಕುರಿತು ನಾಳೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ತಿಳಿಸಿದ್ದಾರೆ.


ಶೇ,50 ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ದಂಡ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದು, ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್’ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು 50 ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಇನ್ನು ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 120 ಕೋಟಿ 76 ಲಕ್ಷ 40 ಸಾವಿರದ 161 ರೂ ಹರಿದುಬಂದಿತ್ತು.

Join Whatsapp
Exit mobile version