ಯುದ್ಧಪೀಡಿತ ಉಕ್ರೇನ್ ನಲ್ಲಿ ಉಳಿದಿರುವ 50 ಭಾರತೀಯರು: ವಿದೇಶಾಂಗ ಸಚಿವಾಲಯ

Prasthutha|

ನವದೆಹಲಿ: ಯುದ್ಧಪೀಡಿತ ಉಕ್ರೇನ್‌’ನಲ್ಲಿ ಇನ್ನೂ 50 ಮಂದಿ ಭಾರತೀಯರು ಇದ್ದಾರೆ. ಈ ಪೈಕಿ 15ರಿಂದ 20 ಮಂದಿ ತವರಿಗೆ ಮರಳಲು ಬಯಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

- Advertisement -

‘ಆಪರೇಷನ್ ಗಂಗಾ’ ಇನ್ನೂ ಚಾಲ್ತಿಯಲ್ಲಿದೆ. ಸ್ವದೇಶಕ್ಕೆ ಮರಳಲು ಇಚ್ಛಿಸುವವರನ್ನು ಕರೆತರಲು ನಾವೇನು ಮಾಡಬಹುದೋ ಅದನ್ನು ಮಾಡಲಿದ್ದೇವೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಮೂಲಕ 22,500 ಮಂದಿಯನ್ನು ಸ್ವದೇಶಕ್ಕೆ ಕರೆಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Join Whatsapp