ಸಂಚಾರ ನಿಯಮ​ ಉಲ್ಲಂಘನೆ| ದಂಡಕ್ಕೆ 50% ರಿಯಾಯಿತಿ, 8 ದಿನದಲ್ಲಿ 85‌.83 ಕೋಟಿ ರೂ.‌ ಸಂಗ್ರಹ

Prasthutha|

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಮಾಡಿದ ಬೆನ್ನಲ್ಲೇ ವಾಹನ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದಾರೆ.

- Advertisement -

8ನೇ ದಿನವಾದ ಫೆ.10ನೇ ತಾರೀಕಿನಂದು 67, 0602 ಪ್ರಕರಣಗಳಲ್ಲಿ 17.61 ಕೋಟಿ‌ ರೂಪಾಯಿ ದಂಡದ ಹಣ ಸಂಗ್ರಹವಾಗಿದೆ. ಇದರೊಂದಿಗೆ 31.11 ಲಕ್ಷ ಪ್ರಕರಣಗಳಲ್ಲಿ 85‌.83 ಕೋಟಿ ರೂಪಾಯಿ ಹಣ ಕಲೆಕ್ಷನ್ ಆಗಿದೆ.

- Advertisement -

50% ರಿಯಾಯಿತಿಯಲ್ಲಿ ದಂಡ ಪಾವತಿಗೆ ಇಂದು (ಫೆಬ್ರವರಿ 11) ಕೊನೆಯ ದಿನವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿಮಯ ಉಲ್ಲಂಘಿಸಿದ ವಾಹನ ಸವಾರರು ಕಳೆದ ಎರಡು ದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ದಂಡ ಪಾವತಿ ಮಾಡುತ್ತಿದ್ದಾರೆ. ಇಂದು ಕೊನೆ ದಿನವಾಗಿದ್ದರಿಂದ ದಂಡದ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

Join Whatsapp