ಮಹಾಪ್ರವಾಹಕ್ಕೆ 50 ವರ್ಷ: 1974ರಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಕಂಡ ಭೀಕರ ನೆರೆ..!

Prasthutha|

ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

- Advertisement -

ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

- Advertisement -

ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.



Join Whatsapp