Home ಟಾಪ್ ಸುದ್ದಿಗಳು ರಾಜ್ಯಾದ್ಯಂತ 2,000 ಕೋಟಿ ಮೌಲ್ಯದ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಸಚಿವ ಈಶ್ವರ್ ಖಂಡ್ರೆ

ರಾಜ್ಯಾದ್ಯಂತ 2,000 ಕೋಟಿ ಮೌಲ್ಯದ 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯಾದ್ಯಂತ ಸುಮಾರು 2,000 ಕೋಟಿ ರೂಪಾಯಿ ಮೌಲ್ಯದ ಸುಮಾರು 5,000 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ಅದರಲ್ಲಿ ಹೆಚ್ಚಿನವು ಕೊಡಗಿನಲ್ಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಅವರು ಮಂಗಳವಾರ ಹೇಳಿದರು.

ವಿಕಾಸಸೌಧದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಕಾಫಿ, ಟೀ, ರಬ್ಬರ್ ಬೆಳೆಯಲು ಸಾವಿರಾರು ಎಕರೆ ಭೂಮಿಯನ್ನು ಲೀಸ್ಗೆ ನೀಡಲಾಗಿತ್ತು. ಲೀಸ್ ಹಣ ಬರದೇ ಇದ್ದ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ. ಎಕರೆಗೆ ಕೇವಲ ಎರಡು ರೂ. ನಿಂದ ಏಳು ರೂ. ಅಂತ ನಿಗದಿ ಮಾಡಿಕೊಡಲಾಗಿತ್ತು. 1997 ರಲ್ಲಿ ಹೆಕ್ಟೇರ್ ಗೆ 5 ಸಾವಿರ ರೂ. ಅಂತ ನಿಗದಿ ಮಾಡಲಾಗಿತ್ತು. ಆ ಪ್ರಕಾರ ಲೀಸ್ ಹಣ ಬಾಕಿ ಉಳಿಸಿಕೊಂಡ ಕಂಪನಿಗಳಿಂದ ಭೂಮಿ ವಾಪಸ್ ಪಡೆಯಲಾಗುತ್ತದೆ ಎಂದು ಹೇಳಿದರು.

Join Whatsapp
Exit mobile version