ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬಹುಭಾಷಾ ನಟ ರಜನಿಕಾಂತ್

Prasthutha|

ನವದೆಹಲಿ: ಭಾರತೀಯ ಚಲನಚಿತ್ರ ರಂಗದಲ್ಲಿ ತನ್ನ ಅದ್ಭುತ ನಟನೆಯ ಮೂಲಕ ವಿಶ್ವವಿಖ್ಯಾತಿ ಪಡೆದಿರುವ ತಮಿಳುನಟ ರಜನಿಕಾಂತ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

- Advertisement -

ಬಹುಭಾಷಾ ನಟರಾಗಿರುವ ರಜನಿಕಾಂತ್ ಅವರಿಗೆ 51 ನೇ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ನವದೆಹಲಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿ, ಸನ್ಮಾನಿಸಿದರು.

ವಿಶ್ವಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್ ಅವರು ನಟನೆಯಲ್ಲಿ 45 ವರ್ಷಗಳ ಅನುಭವವನ್ನು ಹೊಂದಿದ್ದು, ಭಾರತದ ಫಿಲಂ ಇಂಡಸ್ಟೀಸ್ ನಲ್ಲಿ ಬಹುಭಾಷಾ ಹಿರಿಯ ನಟರಾಗಿದ್ದಾರೆ.

Join Whatsapp