ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಸಂಬಂಧ 10 ಎಫ್ ಐಆರ್ ದಾಖಲು ಮಾಡಲಾಗಿದ್ದು, ಅಧ್ಯಕ್ಷ ನಾರಾಯಣಗೌಡ ಸೇರಿ 53 ಜನರನ್ನ ಅರೆಸ್ಟ್ ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಬೆಂಗಳೂರು ಕಮಿಷನರ್ ಬಿ.ದಯಾನಂದ್ ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕದಡುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.