ಬೆಂಗಳೂರು: ಕರ್ನಾಟಕದಲ್ಲಿ 5, 8, 9ನೇ ತರಗತಿಯ ಪಬ್ಲಿಕ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಮಾರ್ಚ್ 13ರಿಂದ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಈ ಕುರಿತು ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ನೃಪತುಂಗ ರಸ್ತೆ, ಬೆಂಗಳೂರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದ ತನಕ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ಆದೇಶ ಹೇಳಿದೆ. ದಿನಾಂಕ 13/3/2024ರ ಬುಧವಾರದಿಂದ ನಡೆಯಬೇಕಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದ ತನಕ ಮುಂದೂಡಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.