ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಹೈಕೋರ್ಟ್ ಬಳಿಕ, ಸುಪ್ರೀಂ ಕೋರ್ಟ್ ಕೂಡ ರದ್ದುಪಡಿಸಿದ್ದು, ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರು ಸಲ್ಲಿಸಿದ್ದ ವಿಚಾರಣೆಯನ್ನು ಹೈಕೋರ್ಟ್ ಇಂದು 15.3.2024) ವಿಚಾರಣೆ ನಡೆಸಲಿದೆ.
ಶಾಲಾ ಶಿಕ್ಷಣ ಇಲಾಖೆ ನಿಗದಿ ಪಡಿಸಿದ್ದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಕೋರಿ ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ನ್ಯಾಯಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್, 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸೋದಕ್ಕೆ ಗ್ರೀನ್ ಸಿಗ್ನಲ್ ನೀಡಿತ್ತು.
ಆದರೆ, ಹೈಕೋರ್ಟ್ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳ ಸಂಘದಿಂದ ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಬಾಕಿ ಇರುವ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ಹೀಗಾಗಿ ಶಾಲಾ ಶಿಕ್ಷಣ ಇಲಾಖೆಯಿಂದ ಬೋರ್ಡ್ ಪರೀಕ್ಷೆಯನ್ನು ಮುಂದೂಡಿ ಆದೇಶ ಕೂಡ ಮಾಡಲಾಗಿತ್ತು.
ಈ ಬೆನ್ನಲ್ಲೇ ಗುರುವಾರ ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದ್ದ ಸೂಚನೆಯಂತೆ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಶುಕ್ರವಾಎ ವಿಚಾರಣೆ ನಡೆಯಲಿದೆ
ಅಲ್ಲದೆ,5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೆ ಮಾಡಲು ಪ್ರತಿವಾದಿಗಳು ಸಲ್ಲಿಸಿದ್ದಂತ ಮನವಿಯನ್ನು ತಿರಸ್ಕರಿಸಿದೆ.