Home ಟಾಪ್ ಸುದ್ದಿಗಳು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ʼಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

ನಗರದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲು ಸಿಎಂ ಮತ್ತು ಗಣ್ಯರು, ಓರ್ವ ಯುವತಿ ಹಾಗೂ ಯುವಕನನ್ನ ವೇದಿಕೆ ಮೇಲೆ ಕರೆಸಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬಳಿಕ ಸಿಎಂ ಹಾಗೂ ಡಿಸಿಎಂ ಯುವನಿಧಿ ಯೋಜನೆ ಪೋಸ್ಟರ್ ಬಿಡುಗಡೆ ಮಾಡಿದರು. ಇದೇ ವೇಳೆ ಸಿಎಂ ಅವರು ಯುವನಿಧಿ ಯೋಜನೆಯ ಲೋಗೋ ಬಿಡುಗಡೆ ಮಾಡಿದರು. ನಂತರ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

Join Whatsapp
Exit mobile version