ಆಟೋ ರಿಕ್ಷಾಗೆ ಕಾರು ಡಿಕ್ಕಿ: 6 ಮಂದಿ ಸ್ಥಳದಲ್ಲೇ ಸಾವು !

Prasthutha|

ಬೀಡ್: ಕಾರು ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ನಡೆದಿದೆ.


ಕೇಜ್ ತಹಸಿಲ್ ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಮತ್ತು ಆಟೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -


ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 6 ಮಂದಿ ರಸ್ತೆಯ ಮೇಲೆ ಪ್ರಾಣಬಿಟ್ಟಿದ್ದಾರೆ. ಸಂತ್ರಸ್ತರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -