ದೇವಸ್ಥಾನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಕಾರು: 6 ಮಂದಿ ಮೃತ್ಯು

Prasthutha|

ಗುಜರಾತ್: ದೇವಸ್ಥಾನಕ್ಕೆ ತೆರಳುತ್ತಿದ್ದವರ ಮೇಲೆ ಕಾರೊಂದು ಹರಿದು 6 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

- Advertisement -


ಅರಾವಳಿ ಜಿಲ್ಲೆಯ ಮಾಲ್ಪುರ್ ಎಂಬಲ್ಲಿನ ಕೃಷ್ಣನಗರದ ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗುತ್ತಿದ್ದ ಜನರ ಮೇಲೆ ವೇಗವಾಗಿ ಬಂದ ಇನ್ನೋವಾ ಕಾರು ಹರಿದಿದೆ. ಪರಿಣಾಮ, ಆರು ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, ಇತರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.




Join Whatsapp