ಶಾಲಾ ಬಸ್-ಕಾರು ನಡುವೆ ಡಿಕ್ಕಿ: 6 ಮಂದಿ ಮೃತ್ಯು

Prasthutha|

ನವದೆಹಲಿ: ಶಾಲಾ ಬಸ್-ಕಾರು ನಡುವೆ ಅಪಘಾತ ಸಂಭವಿಸಿ 6 ಮಂದಿ ಸಾವನ್ನಪ್ಪಿರುವ ಘಟನೆ ಗಾಜಿಯಾಬಾದ್ ನ ದೆಹಲಿ-ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಮಂಗಳವಾರ ನಡೆದಿದೆ.

- Advertisement -

ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಎಂದು ತಿಳಿದುಬಂದಿದೆ. ಘಟನೆಯಲ್ಲಿ 8 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ.


ಗಾಯಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Join Whatsapp
Exit mobile version