ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಪೋಟದ ಅಬ್ಬರಕ್ಕೆ 6 ಮಂದಿ ಬಲಿ, ಹಲವರು ನಾಪತ್ತೆ !

Prasthutha|

ಜಮ್ಮು , ಜುಲೈ 28: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಉಂಟಾದ ಭೀಕರ ಮಳೆ ಮೋಡ ಬಿರುಗಾಳಿಗೆ ಕನಿಷ್ಟ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಾಯಗೊಂಡಿದ್ದಾರೆ. ಮಾತ್ರವಲ್ಲದೇ 40 ಮಂದಿ ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ.

- Advertisement -

ಕಿಶ್ತ್ವಾರ್ ಜಿಲ್ಲೆಯ ಡಚನ್ ಎಂಬಲ್ಲಿನ ಹೊನ್ಜಾನ್ ಗ್ರಾಮಕ್ಕೆ ಅಪ್ಪಳಿಸಿದ ಸಿಡಿಲು- ಮಿಂಚು ಮಿಶ್ರಿತ ಮಳೆಯ ಕಾರಣದಿಂದ ಭೀಕರ ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ ಆರು ಶವಗಳನ್ನು ಮೇಲೆತ್ತಲಾಗಿದೆ. ಗಾಯಗೊಂಡ ಐದು ಮಂದಿಯನ್ನು ರಕ್ಷಿಸಲಾಗಿದೆಯೆಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಫ್ಕತ್ ಹುಸೇನ್ ರವರು ಸುದ್ದಿಗಾರರಿಗೆ ತಿಳಿಸಿದ್ದಾರೆ.


ಈ ಭೀಕರ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕನಿಷ್ಟ 40 ಮಂದಿ ಈ ಘಟನೆಯ ನಂತರ ಕಾಣೆಯಾಗಿದ್ದಾರೆ. ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆಗಾಗಿ ಸಾಕಷ್ಟು ಶ್ರಮ ವಹಿಸುತ್ತಿದೆ. ಸ್ಥಳೀಯ ಪೊಲೀಸರು, ಸೇನೆ ಮತ್ತು ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣದಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆಯೆಂದು ಹೇಳಲಾಗುತ್ತಿದೆ



Join Whatsapp