Home ಕರಾವಳಿ ಕಾಣಿಯೂರಿನಲ್ಲಿ ಮುಸ್ಲಿಮ್ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ಪ್ರಕರಣ: ಆರು ಮಂದಿ ಸಂಘಪರಿವಾರದ ಕಾರ್ಯಕರ್ತರ ಬಂಧನ

ಕಾಣಿಯೂರಿನಲ್ಲಿ ಮುಸ್ಲಿಮ್ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ ಪ್ರಕರಣ: ಆರು ಮಂದಿ ಸಂಘಪರಿವಾರದ ಕಾರ್ಯಕರ್ತರ ಬಂಧನ

ಪುತ್ತೂರು: ಇಬ್ಬರು ಜವಳಿ ವ್ಯಾಪಾರಿಗಳಿಗೆ ಸಂಘ ಪರಿವಾರದ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು ಆರು ಮಂದಿ ಸಂಘಪರಿವಾರದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.


ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್, ರಂಜಿತ್ ಬಂಧಿತ ಆರೋಪಿಗಳು. ಆರೋಪಿಗಳ ವಿರುದ್ಧ ಐಪಿಸಿ 143, 144, 341,504, 323, 324, 427, 149 ಕಲಂಗಳಡಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಮಂಗಳೂರು ತಾಲ್ಲೂಕಿನ ಅಡ್ಡೂರು ನಿವಾಸಿಗಳಾದ ರಮೀಝುದ್ದೀನ್ ಮತ್ತು ರಫೀಕ್ ಎಂಬವರು ಕಳೆದ ಗುರುವಾರ ಜವಳಿ ವ್ಯಾಪಾರಕ್ಕೆಂದು ಕಾಣಿಯೂರು ಗ್ರಾಮಕ್ಕೆ ಹೋಗಿದ್ದಾಗ 50 ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮಾತ್ರವಲ್ಲದೆ ಇಬ್ಬರ ಮೇಲೆ ಬೈಕ್ ಹತ್ತಿಸಿ ಕೊಲೆಗೆ ಯತ್ನಿಸಿದ್ದರು.
ಇದೇ ವೇಳೆ ಹಲ್ಲೆಗೊಳಗಾದ ರಮೀಝುದ್ದೀನ್ ಮತ್ತು ರಫೀಕ್ ವಿರುದ್ಧ ಪರಿಶಿಷ್ಟ ಜಾತಿ, ಪಂಗಡ ತಡೆ ಕಾಯ್ದೆ ಹಾಗೂ ಐಪಿಸಿ 448,354, 341 ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಅವರು ಆಸ್ಪತ್ರೆಯಲ್ಲಿರುವುದರಿಂದ ಅವರನ್ನು ಬಂಧಿಸಿಲ್ಲ, ಪೊಲೀಸ್ ಕಾವಲು ಹಾಕಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Join Whatsapp
Exit mobile version