Home ಟಾಪ್ ಸುದ್ದಿಗಳು ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಕೊಳವೆ ಬಾವಿಗೆ ಬಿದ್ದ 6 ವರ್ಷದ ಬಾಲಕ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭೋಪಾಲ್: 6 ವರ್ಷದ ಬಾಲಕ ಆಕಸ್ಮಿಕವಾಗಿ 400 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಮಾಂಡವಿ ಗ್ರಾಮದಲ್ಲಿ ನಡೆದಿದೆ.

ಬಾಲಕ ತನ್ಮಯ್ ದಿಯಾವಾರ್ ಮೈದಾನದಲ್ಲಿ ಆಡುತ್ತಿದ್ದಾಗ ಇತ್ತೀಚೆಗಷ್ಟೇ ಅಗೆದಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾನೆ ಎಂದು ಆಥನರ್ ಪೊಲೀಸ್ ಠಾಣೆಯ ಅಧಿಕಾರಿ ಅನೊಲ್ ಸೋನಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಆಡಳಿತ ಮಂಡಳಿಗೆ ಮಾಹಿತಿ ನೀಡಲಾಗಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಮಗುವಿನ ಚಲನವಲನದ ಮೇಲೆ ನಿಗಾ ಇಡಲು ಬೋರ್‌ವೆಲ್ ಗೆ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಬೆತುಲ್ ಜಿಲ್ಲಾಧಿಕಾರಿ ಅಮನ್‌ವೀರ್ ಸಿಂಗ್ ಬೈನ್ಸ್ ಹೇಳಿದ್ದಾರೆ.

ಕೊಳವೆ ಬಾವಿಯ ಸುಮಾರು 60 ಅಡಿ ಆಳದಲ್ಲಿ ಬಾಲಕ ಸಿಲುಕಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಬೋರ್‌ವೆಲ್‌ನಲ್ಲಿ ಆಮ್ಲಜನಕ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ಜೆಸಿಬಿ ಯಂತ್ರಗಳ ಸಹಾಯದಿಂದ ಬೋರ್‌ವೆಲ್‌ಗೆ ಸಮಾನಾಂತರವಾಗಿ ಸುರಂಗ ತೋಡಲಾಗುತ್ತಿದೆ. ಜಿಲ್ಲಾಧಿಕಾರಿ, ಎಸ್ಪಿ ಸಿಮಲಾ ಪ್ರಸಾದ್ ಇತರ ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸುತ್ತಿದ್ದು, ಜಿಲ್ಲಾಧಿಕಾರಿಯಿಂದ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Join Whatsapp
Exit mobile version