ಬೆಂಗಳೂರು: ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಪ್ರತಿಭಟನೆ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಬಂಧನದ ವಿರುದ್ಧ ಕನ್ನಡ ಪರ ಸಂಘಟನೆಗಳು ಸಿಡಿದೆದ್ದಿವೆ.
ಇದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ದಿಢೀರ್ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುತ್ತೆ ಎಂದು ಸ್ಪಷ್ಟಪಡಿಸಿದರು.